ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:ಸಿಎಂ‌ ಸಿದ್ದರಾಮಯ್ಯ

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:ಸಿಎಂ‌ ಸಿದ್ದರಾಮಯ್ಯ
Facebook
Twitter
LinkedIn
WhatsApp

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ ಅವರು ಕಾರ್ಯಕ್ಷೇತ್ರದಲ್ಲಿ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.


ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ, ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ , ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಉಪಸ್ಥಿತರಿದ್ದರು.

News By: Raghu Shikari-7411515737