ನವದೆಹಲಿ: ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲವು ರಾಜ್ಯಗಳು ಜಾತಿ ಸಮೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು ಎಂಬ ಹಿನ್ನೆಲೆಯಲ್ಲಿ ಜನಗಣತಿಯಲ್ಲಿ ಜಾತಿಗಣತಿಯ ಮಾಹಿತಿಯನ್ನು ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಜಾತಿ ಗಣತಿ ಜೊತೆಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.