ಜಾತಿಗಣತಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ: ಸಿಎಂ ಸಿದ್ದರಾಮಯ್ಯ

ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಒಪ್ಪಿಗೆ
Facebook
Twitter
LinkedIn
WhatsApp


ಬೆಂಗಳೂರು: ಜಾತಿ ಗಣತಿಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ನಿರ್ಧಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸುವಂತೆ ಸಲಹೆ ನೀಡಿದ್ದಾರೆ.


ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮೇಲೆ ಜಾತಿಗಣತಿ ನಡೆಸುವಂತೆ ಒತ್ತಡ ಹೇರಿದ್ದ ರಾಹುಲ್ ಗಾಂಧಿಯವರನ್ನು ಅವರು ಅಭಿನಂದಿಸಿದ್ದಾರೆ.

ಜನಗಣತಿ ಜತೆಗೆ ಜಾತಿಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ 1931ರ ಬಳಿಕ ಜಾತಿ ಜನಗಣತಿ ನಡೆದಿರಲಿಲ್ಲ ಎಂದು ತಿಳಿಸಿದ್ದಾರೆ. ಜನಗಣತಿ ಜತೆಗೆ ಜಾತಿಗಣತಿ ನಡೆಸಲು ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿರುವುದು ಅತ್ಯುತ್ತಮ ನಿರ್ಧಾರವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ದೊರಕಲಿದೆ ಎಂದು ಹೇಳಿದ್ದಾರೆ.

News By: Raghu Shikari-7411515737