ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಧ್ಯಾಹ್ನದ ಬಳಿಕ ವೆಬ್‌ಸೈಟ್‌ನಲ್ಲಿ ಪ್ರಕಟ

ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಧ್ಯಾಹ್ನದ ಬಳಿಕ ವೆಬ್‌ಸೈಟ್‌ನಲ್ಲಿ ಪ್ರಕಟ
Facebook
Twitter
LinkedIn
WhatsApp

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30 ರ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. https://www.sc.gov.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಎಸ್‌ಎಮ್‌ಎಸ್‌ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದ್ದು, ಏಂಖ 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿದರೆ, ಫಲಿತಾಂಶವನ್ನು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಈ ಬಾರಿ 8 ಲಕ್ಷದ 96 ಸಾವಿರದ 447 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

News By: Raghu Shikari-7411515737