ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹಸಚಿವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ.
ಐಜಿ ಮಟ್ಟದ ಅಧಿಕಾರಿ ಇದರ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗುಂಪು ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯಬಾರದು. ಯಾವುದೇ ಕಾರಣಕ್ಕೂ ಕರಾವಳಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
News By: Raghu Shikari-7411515737