ಭಾರತೀಯ ಸಶಸ್ತ್ರ ಪಡೆಗಳು ಮಧ್ಯರಾತ್ರಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ.
ಒಟ್ಟು ಒಂಬತ್ತು ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಕ್ರಮಗಳು ಕೇಂದ್ರೀಕೃತವಾಗಿವೆ ಎಂದು ಸಚಿವಾಲಯ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದರು.ಇದೇ ವೇಳೆ ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಲಾಗಿಲ್ಲ. ಗುರಿಗಳ ಆಯ್ಕೆ ಮತ್ತು ಕಾರ್ಯಗತಗೊಳಿಸುವ ವಿಧಾನದಲ್ಲಿ ಭಾರತವು ಸಾಕಷ್ಟು ಸಂಯಮವನ್ನು ಪ್ರದರ್ಶಿಸಿದೆ ಎಂದು ಸಚಿವಾಲಯ ತಿಳಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಬದ್ಧತೆಗೆ ಸಶಸ್ತ್ರ ಪಡೆಗಳು ಬದ್ಧವಾಗಿವೆ ಎಂದು ಸಚಿವಾಲಯ ಹೇಳಿದೆ.