ರಾಜಧಾನಿ ಬೆಂಗಳೂರಿನ ಮಳೆ ಹಾನಿ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ನಡೆಸಿದರು.
ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ವೇಳೆ ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದ್ದಾರೆ.

ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.ಬಳಿಕ ಊಃಖ ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿದ ಮುಖ್ಯಮಂತ್ರಿಗಳು ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ನಿರ್ದೇಶನ ನೀಡಿದ್ದಾರೆ.ಮಳೆ ಬಾದಿತ ಪ್ರದೇಶಗಳಲ್ಲಿ ಬೇಸ್ ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ನಗರ ಯೋಜನೆಯಲ್ಲಿ ಬದಲಾವಣೆ ತರುವಂತೆ ತಿಳಿಸಿದ್ದಾರೆ.
News By,: Raghu Shikari-7411515737