ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ
Facebook
Twitter
LinkedIn
WhatsApp

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು -ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಮತ್ತು ಡಿಎನ್‌ಎ ಕಾರ್ಯಕ್ರಮ ನಿರ್ವಹಣಾ ಕಂಪನಿ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಈವೆಂಟ್ ಮ್ಯಾನೇಜ್‌ಮೆಂಟ್‌ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ – ಕೆಎಸ್‌ಸಿಎ ಕಾರ್ಯದರ್ಶಿ ಶಂಕರ್ ಮತ್ತು ಕೆಎಸ್‌ಸಿಎ ಖಜಾಂಚಿ ಜಯರಾಮ್ ಅವರ ನಿವಾಸಗಳ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರ ಸಿಬ್ಬಂದಿ ಮತ್ತು ಕೇಂದ್ರ ಅಪರಾಧ ವಿಭಾಗ – ಸಿಸಿಬಿ ವಿಶೇಷ ವಿಭಾಗ ಜಂಟಿ ಕಾರ್ಯಾಚರಣೆ ನಡೆಸಿದೆ. ಬಂಧಿತ ವ್ಯಕ್ತಿಗಳು ಮುಂಬೈಗೆ ತೆರಳುತ್ತಿದ್ದಾಗ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಸಹಾಯಕ ಪೊಲೀಸ್ ಆಯುಕ್ತರು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯೋತ್ಸವ ಆಚರಣೆ ಕಾರ್ಯಕ್ರಮಕ್ಕಾಗಿ ಕ್ರೀಡಾಂಗಣದಲ್ಲಿ ಉಚಿತ ಟಿಕೆಟ್‌ಗಳು ಲಭ್ಯವಿದೆ ಎಂದು ಅವರು ಘೋಷಿಸಿದ್ದರು. ಬುಧವಾರ ಮಧ್ಯಾಹ್ನ 1 ಗಂಟೆಗೆ ಗೇಟ್ ಸಂಖ್ಯೆ 9 ಮತ್ತು 10 ರಲ್ಲಿ ಟಿಕೆಟ್‌ಗಳು ಲಭ್ಯವಿರುತ್ತವೆ ಎಂದು ಅವರು ಘೋಷಿಸಿದ್ದರು ಮತ್ತು ಟಿಕೆಟ್‌ಗಳನ್ನು ವಿತರಿಸಲು ವ್ಯವಸ್ಥೆ ಮಾಡಲಿಲ್ಲ ಎಂದು ಆರೋಪಿಸಲಾಗಿದೆ.

News By: Raghu Shikari-7411515737