ಕೋಮು ಸಂಘರ್ಷ ತಡೆಗೆ ವಿಶೇಷ ಕಾರ್ಯಪಡೆ ರಚನೆ:ಗೃಹ ಸಚಿವ ಚಾಲನೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಠಿಣ ಕಾನೂನು ಜಾರಿಗೆ ಸಿದ್ದತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Facebook
Twitter
LinkedIn
WhatsApp

ಮಂಗಳೂರು: ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದ್ದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ.

ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು,284 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಎಸ್‌ಎಎಫ್ ಅಗತ್ಯವಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ದರೆ ರಾಜ್ಯದಲ್ಲಿ ಶಾಂತಿ ಇರುತ್ತದೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದರು.