ಶಿಕಾರಿಪುರ ಗಾಂಜಾ ಮಾರಟ ಆರೋಪಿಗಳಿಗೆ ಕಠಿಣ ಕಾರಗೃಹ ಶಿಕ್ಷೆ..!

ಶಿಕಾರಿಪುರ ಗಾಂಜಾ ಮಾರಟ ಆರೋಪಿಗಳಿಗೆ ಕಠಿಣ ಕಾರಗೃಹ ಶಿಕ್ಷೆ..!
Facebook
Twitter
LinkedIn
WhatsApp

ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಗುಂಡಿ ಏರಿಯಾದಲ್ಲಿ,ದಿನಾಂಕಃ 05-12-2021 ರಂದು ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಪಿಐ ಗುರುರಾಜ್ ಮತ್ತು ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಆರೋಪಿತರಾದ ಯಾಸಿರ್ ಪಾಷಾ ಹಾಗೂ ಶಹಜಾನ್ @ ಸಾನಿಯಾ ಬೇಗಂ* ರವರುಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0113/2021 ಕಲಂ 8(c), 20 (b) (II)(B), NDPS Act ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಪಿ.ಎಸ್.ಐ, ಶಿಕಾರಿಪುರ ಟೌನ್ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ, ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸುರೇಶ್ ಕುಮಾರ್ ಎ. ಎಂ. ಸರ್ಕಾರಿ ಅಭಿಯೋಜಕರವರು, ಪ್ರಕರಣದ ವಾದ ಮಂಡಿಸಿದ್ದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತರ ವಿರುದ್ದ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಮಂಜುನಾಥ್ ನಾಯಕ್ ರವರು ದಿನಾಂಕಃ 13-06-2025 ರಂದು ಆರೋಪಿ-1) ಯಾಸೀರ್ ಪಾಷಾ, 27 ವರ್ಷ, ಶಿಕಾರಿಪುರ ಟೌನ್ ಈತನಿಗೆ 06 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 50,000/- ದಂಡ* ಹಾಗೂ *ಆರೋಪಿ -2) ಶಹಜಾನ್ @ ಸಾನಿಯಾ ಬೇಗಂ,52 ವರ್ಷ, ಶಿಕಾರಿಪುರ ಟೌನ್ ಈಕೆಗೆ 3 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 25,000/- ದಂಡ ವಿಧಿಸಿ ಆದೇಶಿಸಿರುತ್ತಾರೆ.

News by: Raghu Shikari-7411515737