ನೆಹರೂ ಒಳಾಂಗಣದ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ ..!

ನೆಹರೂ ಒಳಾಂಗಣದ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ ..!

ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ನೆಹರೂ ಕ್ರೀಡಾಂಗಣದ ಹಿಂಭಾಗದಲ್ಲಿ ಒಳಾಂಗಣ ಕ್ರೀಡಾಂಗಣವನ್ನು ನಿರ್ವಹಣೆ ಮಾಡುತ್ತಿದ್ದು, ಇಲ್ಲಿ 6 ಷಟಲ್ ಬ್ಯಾಡ್ಮಿಂಟನ್ ಕೋರ್ಟ್ ಮತ್ತು ಕೇರಂ ಕ್ರೀಡೆಗಳಿಗೆ ಸಂಬಂಧಿಸಿದಂತೆ ಹೊಸ ಸದಸ್ಯತ್ವವನ್ನು ಆಹ್ವಾನಿಸಲಾಗಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸದಸ್ಯತ್ವ ಶುಲ್ಕ ಮತ್ತು ಮಾಸಿಕ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಸದಸ್ಯತ್ವ ಪಡೆಯಲು ಇಚ್ಛಿಸುವ ಆಸಕ್ತ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಬೇಟಿ ನೀಡಿ ವಿವರಗಳನ್ನು ಪಡೆಯುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Admin

Leave a Reply

Your email address will not be published. Required fields are marked *

error: Content is protected !!