ಜಿಲ್ಲೆಯ 33 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ: ಜಿಲ್ಲಾಡಳಿತ ಸಂಪೂರ್ಣ ಸಜ್ಜು..!

ಜಿಲ್ಲೆಯ 33 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ: ಜಿಲ್ಲಾಡಳಿತ ಸಂಪೂರ್ಣ ಸಜ್ಜು..!

ಶಿವಮೊಗ್ಗ : ಜೂನ್ 18ರಂದು ನಡೆಯುವ ದ್ವಿತೀಯ ಪಿಯುಸಿ ಆಂಗ್ಲ ಪರೀಕ್ಷೆಯು ಜಿಲ್ಲೆಯ 33 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 5 ಪರೀಕ್ಷಾ ಕೇಂದ್ರಗಳ್ಲಿ 900ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಕೋವಿಡ್-19ರ ಮಾರ್ಗಸೂಚಿಯಂತೆ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಮಾಡಿ ಸ್ಯಾನಿಟೈಸಿಂಗ್ ಮಾಡಿಸಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳಿಗೆ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳು ಆರೋಗ್ಯ ಸುರಕ್ಷತೆಯ ದೃಷ್ಠಿಯಿಂದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪರೀಕ್ಷಿಸಿ ಕೊಠಡಿವಾರು ಒಳಬಿಡಲಾಗುವುದು ಎಂದು ಪ.ಪೂ.ಶಿ.ಇ ಉಪನಿರ್ದೇಶಕರು ತಿಳಿಸಿದ್ದಾರೆ.

ಕಂಟೋನ್ಮೇಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳಿಂದ 791 ವಿದ್ಯಾರ್ಥಿಗಳು ಹಾಗೂ ಈ ಜಿಲ್ಲೆಯಿಂದ 372 ವಿದ್ಯಾರ್ಥಿಗಳು ಇತರೆ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿರುತ್ತಾರೆ.

ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪಿ.ಯು ವೆಬ್‍ಸೈಟ್‍ನಿಂದ ಹೆಚ್ಚುವರಿ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಹಳೆಯ ಪ್ರವೇಶ ಪತ್ರಕ್ಕೆ ಲಗತ್ತಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಬೇರೆ ಜಿಲ್ಲೆಗಳಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಮಾಹಿತಿ ಸಂಗ್ರಹಿಸಿ, ಪರೀಕ್ಷಾ ಕೇಂದ್ರವನ್ನು ಖಾತ್ರಿ ಪಡಿಸಿಕೊಳ್ಳಬೇಕು.

ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು, ನೀರಿನ ಬಾಟಲ ತೆಗೆದುಕೊಂಡು, ಪ್ರವೇಶ ಪತ್ರ ಮತ್ತು ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9.00ರೊಳಗಾಗಿ ಹಾಜರಾಗುವುದು.

ಪರೀಕ್ಷಾ ಕೇಂದ್ರಕ್ಕೆ ಸ್ವಂತ ವ್ಯವಸ್ಥೆಯಿಂದ ಬರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜು ಬಸ್ಸಿನ ಹಾಗೂ ಸರ್ಕಾರಿ ಬಸ್‍ಗಳ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಪ.ಪೂ.ಶಿ.ಇ. ಉಪನಿರ್ದೇಶಕ ನಾಗರಾಜ್ ವಿ. ಕಾಗಲಕರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Admin

Leave a Reply

Your email address will not be published. Required fields are marked *

error: Content is protected !!