ಶಿವಮೊಗ್ಗದಲ್ಲಿ ಕರೋನ ಸೋಂಕಿಗೆ 50 ರ ಶಿಕ್ಷಕ ಸಾವು ಜಿಲ್ಲೆಯಲ್ಲಿ ಮೂರನೇ ಬಲಿ..!

ಶಿವಮೊಗ್ಗದಲ್ಲಿ ಕರೋನ ಸೋಂಕಿಗೆ 50 ರ ಶಿಕ್ಷಕ ಸಾವು ಜಿಲ್ಲೆಯಲ್ಲಿ ಮೂರನೇ ಬಲಿ..!

ಶಿವಮೊಗ್ಗ : ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಶಿಕ್ಷಕರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಮೃತಪಟ್ಟ ಶಿಕ್ಷಕರು ಕಡೂರು ಮೂಲದವರು ಎನ್ನಲಾಗಿದೆ.

ಶಿಕ್ಷಕರಿಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಈ ಸಂದರ್ಭ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು,

ಆದರೆ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು ಕೂಡಲೇ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!