JOB NEWS: ಆರೋಗ್ಯ ಸಂಸ್ಥೆಗಳಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ನೇರ ಸಂದರ್ಶನ..!

JOB NEWS: ಆರೋಗ್ಯ ಸಂಸ್ಥೆಗಳಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ನೇರ ಸಂದರ್ಶನ..!

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯು ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಅರೇ ವೈದ್ಯಕೀಯ ಹುದ್ದೆಗಳನ್ನು 06ತಿಂಗಳ ಗುತ್ತಿಗೆ ಅವಧಿಗೆ ಅಥವಾ ನೇರ ನೇಮಕಾತಿ ಮುಖೇನ ಹುದ್ದೆಗಳು ಭರ್ತಿಯಾಗುವವರೆಗೆ ತಾತ್ಕಾಲಿಕ ಮೀಸಲಾತಿ ಮತ್ತು ಮೆರಿಟ್ ಆಧಾರದ ಮೇಲೆ 20 ಶುಶ್ರೂಷಣಾಧಿಕಾರಿ, 51 ಫಾರ್ಮಾಸಿ ಅಧಿಕಾರಿ ಹಾಗೂ 17 ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಹುದ್ದೆಗಳಿಗೆ ಸಂಚಿತ ವೇತನದಂತೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

ಶುಶ್ರೂಷಣಾಧಿಕಾರಿ ಹುದ್ದೆಗಳಿಗೆ ಜುಲೈ-21 ರಂದು ಬೆಳಗ್ಗೆ 10 ಗಂಟೆಗೆ, ಫಾರ್ಮಾಸಿ ಅಧಿಕಾರಿ ಹುದ್ದೆಗೆ ಜುಲೈ-21 ರಂದು ಮಧ್ಯಾಹ್ನ 2.30 ಗಂಟೆಗೆ ಹಾಗೂ ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಹುದ್ದೆಗಳಿಗೆ ಜುಲೈ-22 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತಿದ್ದು,

ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಹಾಗೂ 01 ಜೊತೆ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.; 08182-222382 ನ್ನು ಸಂಪರ್ಕಿಸುವುದು.

News By: Raghu Shikari- 7411515737

Admin

Leave a Reply

Your email address will not be published. Required fields are marked *

error: Content is protected !!