ಶಿರಾಳಕೊಪ್ಪ:ಪ್ರಥಮ ಡಿಪ್ಲೊಮೋ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ…!

ಶಿರಾಳಕೊಪ್ಪ:ಪ್ರಥಮ ಡಿಪ್ಲೊಮೋ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ…!

ಶಿವಮೊಗ್ಗ : ಶಿರಾಳಕೊಪ್ಪ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಡಿಪ್ಲೊಮೋ ತರಗತಿಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಆನ್‍ಲೈನ್ ನಾನ್ ಇಂಟರಾಕ್ಟೀವ್ ಕೌನ್ಸಲಿಂಗ್ (ಆನ್‍ಲೈನ್ ಆಪ್ಷನ್ ಎಂಟ್ರಿ) ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಪ್ರವೇಶಾತಿ ತಾತ್ಕಾಲಿಕ ವೇಳಾಪಟ್ಟಿಯನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಮತ್ತು ಕೆಇಎ, ವೆಬ್‍ಸೈಟ್‍ಗಳಲ್ಲಿ ಪ್ರಕಟಿಸಲಾಗಿದ್ದು, ಅರ್ಜಿಗಳನ್ನು ಆಗಸ್ಟ್-22 ರೊಳಗಾಗಿ ಆನ್‍ಲೈನ್‍ನಲ್ಲಿ ಅಥವಾ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಶಿರಾಳಕೊಪ್ಪ ಸಂಸ್ಥೆಯ ಸಹಾಯ ಕೇಂದ್ರದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಹಾಯದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಂದಿಗೆ ಮೀಸಲಾತಿ ಬಯಸುವ ಅಭ್ಯರ್ಥಿಗಳು ತಮ್ಮ ಮೀಸಲಾತಿಯ ಪೂರಕ ದಾಖಲಾತಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜ್‍ನ ದೂ.ಸಂ.: 08187-233855 /7975792426 ನ್ನು ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

News By:Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!