ಶಿವಮೊಗ್ಗ :ಕೋಳಿ ಸಾಕಾಣಿಕೆ ತರಬೇತಿ”ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ…!

ಶಿವಮೊಗ್ಗ :ಕೋಳಿ ಸಾಕಾಣಿಕೆ ತರಬೇತಿ”ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ…!

ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ 10 ದಿನಗಳ ಕೋಳಿ ಸಾಕಣಿಕೆ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿದ್ದು, 7ನೇ ತರಗತಿ ಉತ್ತೀರ್ಣರಾಗಿರಬೇಕು.

ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು ಮತ್ತು ಕಡ್ಡಾಯವಾಗಿ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಬಿಪಿಎಲ್ ಕಾರ್ಡ್ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಮಾಡಲಾಗಿದ್ದು, ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ನವೆಂಬರ್ 02 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721/ 9743429595/9449371579/ 9538271653 ಅಥವಾ ದೂರವಾಣಿ ನಂ: 08182-245721 ಸಂಪರ್ಕಿಸುವುದು.

News by: Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!