ಶಿವಮೊಗ್ಗ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ..!

ಶಿವಮೊಗ್ಗ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ..!

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು., ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭವಾಗಿದ್ದು,

ಪ್ರವೇಶಾತಿಗೆ ಯಾವುದೇ ದಂಡಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ದಿನಾಂಕ: 29.10.2020 ರಂದು ಅಂತಿಮ ದಿನವಾಗಿರುತ್ತದೆ.

ಅರ್ಜಿಯನ್ನು ONLINE ನಲ್ಲಿ ಭರ್ತಿಮಾಡಿ ಪ್ರಾದೇಶಿಕ ಕೇಂದ್ರಕ್ಕೆ ಬಂದು ಪ್ರವೇಶಾತಿ ಶುಲ್ಕವನ್ನು ONLINE ನಲ್ಲಿ ಪಾವತಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವಿವಿಯ ವೆಬ್‍ಸೈಟ್ WWW.KSOUMYSURU.AC.IN ಹಾಗೂ ದೂ.ಸಂ. 08182-250367
ಮೊ:9164467131/ 9739803295/9480765905ಗೆ ಸಂರ್ಪಕಿಸುವುದು.

ಪ್ರವೇಶಾತಿ ಸಂದರ್ಭದಲ್ಲಿ ಪ್ರತಿ ಭಾನುವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಕಛೇರಿ ತೆರೆದಿದ್ದು ಪ್ರವೇಶಾತಿಗೆ ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿವಿಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Admin

Leave a Reply

Your email address will not be published. Required fields are marked *

error: Content is protected !!