ಶಿಕಾರಿಪುರ: ಸರ್ಕಾರಿ ಅರೆಕಾಲಿಕ ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ..!

ಶಿಕಾರಿಪುರ: ಸರ್ಕಾರಿ ಅರೆಕಾಲಿಕ ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ..!

ಶಿಕಾರಿಪುರ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಉಪನ್ಯಾಸಕರು ಮನವಿ ಮಾಡಿದರು.

ರಾಜ್ಯದ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ವತಿಯಿಂದ ಶಿಕಾರಿಪುರದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕೊರೋನ ಲಾಕ್ ಡೌನ್ ಹಿನ್ನಲೇಯಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿದ್ದು ಅದರೆ 8 ತಿಂಗಳುಗಳಿಂದ ಸರ್ಕಾರದಿಂದ ಬರಬೇಕ ಗೌರವಧನ ಇನ್ನೂ ಬಂದಿಲ್ಲ ಇದರಿಂದ ನಮ್ಮ ಜೀವನ ನಡೆಸುವುದು ಕಷ್ಟಕರವಾಗಿದೆ.

ಮಾನವೀಯ ದೃಷ್ಠಿಯಿಂದ ಈ ಹಿಂದೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರ ಗೌರವಧನವನ್ನು ರಾಜ್ಯ ಸರ್ಕಾರ ನೀಡಿದೆ.

ಅದೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರು 700 ಕ್ಕೂ ಹೆಚ್ಚು ಪಾಲಿ ಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರ ಕೋವಿಡ್ ನಿಂದ ರಾಜ್ಯದಲ್ಲಿ ಈ ರೀತಿ ಅನೇಕ ಸಮಸ್ಯೆಗಳು ಕಂಡು ಬಂದಿದ್ದು ಮುಖ್ಯಮಂತ್ರಿಗಳು ಸಮರ್ಥವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ನಿಮ್ಮ ಮನವಿಯನ್ನು ಕೂಡಲೇ ಸರ್ಕಾರದ ಗಮನಕ್ಕೆ ಅದಷ್ಟು ಬೇಗ ಪರಿಹಾರ ನೀಡುವುದಾಗಿ ತಿಳಿಸಿದರು.

Admin

Leave a Reply

Your email address will not be published. Required fields are marked *

error: Content is protected !!