ಶಿವಮೊಗ್ಗ:ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ…!

ಶಿವಮೊಗ್ಗ:ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ…!

ಶಿವಮೊಗ್ಗ: ಎಂಬಿಬಿಎಸ್ ವಿದ್ಯಾರ್ಥಿನಿ ಸಿಮ್ಸ್ ನಲ್ಲಿರುವ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿನ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಿವಮೊಗ್ಗ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ( ಸಿಮ್ಸ್) ವಿದ್ಯಾರ್ಥಿನಿ ನಿಲಯದಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಲಲಿತಾ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶಿಕ್ಷಕ ವೆಂಕಟೇಶ್ ಪುತ್ರಿ ಲಲಿತಾ ನಿನ್ನೆ ರಾತ್ರಿ ಎರಡು ಗಂಟೆಯಿಂದ ರೂಂ ನಿಂದ ಹೊರಬಂದಿರಲಿಲ್ಲ.

ಲಲಿತಾಳ ಗೆಳತಿ ಟೆರೇಸ್ ಮೇಲೆ ಓದಲು ಹೋಗಿದ್ದವಳು ವಾಪಸ್ ಬಂದಾಗ ಬಾಗಿಲು ತೆರೆಯದೇ ಇದ್ದಾಗ ಅನುಮಾನ ಮೂಡಿದೆ.

ಇಂದು ಬೆಳಗ್ಗೆ ಬಾಗಿಲು ತೆರೆಸಿದಾಗ ಲಲಿತಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು ಹಾಗೂ ಸೀಮ್ಸ್ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆಯ ನಂತರ ಆತ್ಮಹತ್ಯೆ ಕಾರಣ ತಿಳಿಯಬೇಕಾಗಿದೆ.

Admin

Leave a Reply

Your email address will not be published. Required fields are marked *

error: Content is protected !!