ಶಿವಮೊಗ್ಗ : ಗ್ರಾಮ ಪಂಚಾಯಿತಿ ಚುನಾವಣೆ ನಾಳೆ ಮತೆಣಿಕೆ 6973 ಅಭ್ಯಾರ್ಥಿಗಳ ಭವಿಷ್ಯ ನಿರ್ಧಾರ…!

ಶಿವಮೊಗ್ಗ : ಗ್ರಾಮ ಪಂಚಾಯಿತಿ ಚುನಾವಣೆ ನಾಳೆ ಮತೆಣಿಕೆ 6973 ಅಭ್ಯಾರ್ಥಿಗಳ ಭವಿಷ್ಯ ನಿರ್ಧಾರ…!

ಶಿವಮೊಗ್ಗ : ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27‌ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಿಗ್ಗೆ 8ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಶಿವಮೊಗ್ಗದ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ, ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಸಂಚಿ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ, ತೀರ್ಥಹಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಡಾ|| ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ, ಸೊರಬ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಸಾಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 70ಎಣಿಕೆ ಮೇಲ್ವಿಚಾರಕರು ಹಾಗೂ 140ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ
ಒಟ್ಟು 172ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 70ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 75ಎಣಿಕೆ ಮೇಲ್ವಿಚಾರಕರು ಹಾಗೂ 150ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. 

ಒಟ್ಟು 154ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 75ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಉಪವಿಭಾಗಾಧಿಕಾರಿ ಪ್ರಕಾಶ್ ಟಿ.ವಿ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 57ಎಣಿಕೆ ಮೇಲ್ವಿಚಾರಕರು ಹಾಗೂ 114ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಒಟ್ಟು 169ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 57ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 66ಎಣಿಕೆ ಮೇಲ್ವಿಚಾರಕರು ಹಾಗೂ 132ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. 

ಒಟ್ಟು 244 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 66 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಸಾಗರದ ಉಪವಿಭಾಗಾಧಿಕಾರಿ ಪ್ರಸನ್ನ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಶಿಕಾರಿಪುರ ತಾಲೂಕಿನ 39 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 165ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ.

ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮೂಕಪ್ಪ ಎಂ.ಕರಭೀಮಣ್ಣನವರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 45ಎಣಿಕೆ ಮೇಲ್ವಿಚಾರಕರು ಹಾಗೂ 90ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಒಟ್ಟು 137ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 45ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹೆಚ್.ಕೆ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60ಎಣಿಕೆ ಮೇಲ್ವಿಚಾರಕರು ಹಾಗೂ 120ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಒಟ್ಟು 151ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಒಟ್ಟು ಜಿಲ್ಲೆಯ 244ಗ್ರಾಮ ಪಂಚಾಯಿತಿಗಳ 1192 ಚುನಾವಣಾ ಕ್ಷೇತ್ರಗಳಿಗೆ 433 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. 433 ಜನ ಎಣಿಕೆ ಮೇಲ್ವಿಚಾರಕರನ್ನು ಹಾಗೂ 866 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ತಾಲೂಕಿನ 40ಗ್ರಾಮ ಪಂಚಾಯಿತಿಗಳ 457 ಸ್ಥಾನಗಳಿಗೆ 1374ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. ಅವರನ್ನು 24ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭದ್ರಾವತಿ ತಾಲೂಕಿನ 35ಗ್ರಾಮ ಪಂಚಾಯಿತಿಗಳ 419ಸ್ಥಾನಗಳಿಗೆ 1070 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 44ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ 336ಸ್ಥಾನಗಳಿಗೆ 840ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 14ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಗರ ತಾಲೂಕಿನ 35ಗ್ರಾಮ ಪಂಚಾಯಿತಿಗಳ 370ಸ್ಥಾನಗಳಿಗೆ 1008ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 30ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿಕಾರಿಪುರ ತಾಲೂಕಿನ 39ಗ್ರಾಮ ಪಂಚಾಯಿತಿಗಳ 428ಸ್ಥಾನಗಳಿಗೆ 1064ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 20ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ 304ಸ್ಥಾನಗಳಿಗೆ 829 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, ಆ ಪೈಕಿ 16ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ 395 ಸ್ಥಾನಗಳಿಗೆ 788ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದು, 07ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲೆಯ 244ಗ್ರಾಮ ಪಂಚಾಯಿತಿಗಳ 2609 ಸ್ಥಾನಗಳಿಗೆ 6973 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದು, ಈ ಪೈಕಿ 155 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ 2450 ಮಂದಿಯ ಆಯ್ಕೆ ನಾಳೆ ನಡೆಯಲಿದೆ.

ಅಲ್ಲದೆ ಯಾವುದೇ ನಾಮಪತ್ರ ಸಲ್ಲಿಕೆಯಾಗದಿರುವುದರಿಂದ ಶಿವಮೊಗ್ಗ ತಾಲೂಕಿನ 02, ಸಾಗರ ಮತ್ತು ಶಿಕಾರಿಪುರ ತಾಲೂಕಿನ ತಲಾ ಒಂದು ಸ್ಥಾನ ಸೇರಿದಂತೆ ಒಟ್ಟು 04ಸ್ಥಾನಗಳು ಉಳಿದಿವೆ.

Admin

Leave a Reply

Your email address will not be published. Required fields are marked *

error: Content is protected !!