ಶಿವಮೊಗ್ಗ: ಆರ್’ಎಎಫ್‌ ಘಟಕಕ್ಕೆ ಅಡಿಗಲ್ಲು ಶಂಕುಸ್ಥಾಪನೆ ಕನ್ನಡವೇ ಮಾಯಾ: ಹೆಚ್‌ ಡಿ ಕುಮಾರಸ್ವಾಮಿ ಸರಣಿ ಟ್ವಿಟ್ ..!

ಶಿವಮೊಗ್ಗ: ಆರ್’ಎಎಫ್‌ ಘಟಕಕ್ಕೆ ಅಡಿಗಲ್ಲು ಶಂಕುಸ್ಥಾಪನೆ ಕನ್ನಡವೇ ಮಾಯಾ: ಹೆಚ್‌ ಡಿ ಕುಮಾರಸ್ವಾಮಿ ಸರಣಿ ಟ್ವಿಟ್ ..!

ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ನಿನ್ನೆ ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ.

ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸರಣಿ ಟ್ವಿಡ್ ಮಾಡಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಭಾರತ ವೈವಿಧ್ಯಮಯ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ.

ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ.

ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.
ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ.
ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ.

ಈ ರೀತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲು ಸಾಲು ಸರಣಿ ಟ್ವಿಟ್ ಮಾಡುವ ಮೂಲಕ ನಮ್ಮ‌ ಆಕ್ರೋಶವನ್ನು ಹೊರಹಾಕಿದ್ದು ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಿ.ಎಸ್ ವೈ ಬಿಜೆಪಿ ಪೇಜ್ ಗೆ ಟ್ಯಾಗ್ ಮಾಡಿ ಟ್ವಿಟ್ ಮಾಡಿದ್ದಾರೆ ಇದ್ದಕ್ಕೆ ಸಾರ್ವಜನಿಕವಾಗಿ ಕುಮಾರಸ್ವಾಮಿ ಟ್ವಿಟ್ ನ್ನು ಜನರು ಬೆಂಬಲಿಸಿದ್ದಾರೆ.

ಕನ್ನಡಪರ ಸಂಘಟನೆಗಳು ಕನ್ನಡಭಿಮಾನಿಗಳು ಕೇಂದ್ರ ಸರ್ಕಾರದ ನೀತಿಗೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಬಿ.ಎಸ್ ವೈ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!