ಶಿಕಾರಿಪುರ:ಪುರಸಭಾ ಸದಸ್ಯನಿಂದ ಲೋಕಸಭಾ ಸದಸ್ಯನಾಗಿಸಿದ್ದೀರಿ ನಿಮ್ಮ ಪ್ರೀತಿ, ಪ್ರೋತ್ಸಾಹ ಋಣವನ್ನು ತೀರಿಸಲು ಸಾಧ್ಯವಿಲ್ಲ:ಸಂಸದ ಬಿ.ವೈ ರಾಘವೇಂದ್ರ..!

ಶಿಕಾರಿಪುರ:ಪುರಸಭಾ ಸದಸ್ಯನಿಂದ ಲೋಕಸಭಾ ಸದಸ್ಯನಾಗಿಸಿದ್ದೀರಿ ನಿಮ್ಮ ಪ್ರೀತಿ, ಪ್ರೋತ್ಸಾಹ ಋಣವನ್ನು ತೀರಿಸಲು ಸಾಧ್ಯವಿಲ್ಲ:ಸಂಸದ ಬಿ.ವೈ ರಾಘವೇಂದ್ರ..!

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಕುಮುದ್ವತಿ ವಿದ್ಯಾಸಂಸ್ಥೆಯಲ್ಲಿ, ಸಾರ್ಥಕ ಸಂವತ್ಸರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಅವರಿಗೆ ಶುಭಾಶಯಗಳನ್ನ ತಿಳಿಸಲು ರಾಜ್ಯ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಮಾಜಿ ಸಚಿವ ಮತ್ತು ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿವಿಧ ಕ್ಷೇತ್ರಗಳಲ್ಲಿಯ ಶಾಸಕರು ಸೇರಿದಂತೆ ಅನೇಕ ಮುಖಂಡರ ಮಹಾಪೂರವೇ ಹರಿದುಬಂದಿತು.

ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರರ ನಮ್ಮ ತಂದೆ ಬಿ. ಎಸ್ ಯಡಿಯೂರಪ್ಪ ರವರಿಗೆ ರಾಜಕೀಯ ನೆಲೆ ನೀಡಿರುವ ತಾಲ್ಲೂಕು ಹಾಗೂ ಜಿಲ್ಲೆಯ ಜನತೆಯ ಋಣ ತೀರಿಸಲು ಎಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರು ಸಾಲದು.

ಪುರಸಭಾ ಸದಸ್ಯರಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಯಾಗುವವರೆಗೂ ನನ್ನ ತಂದೆಯ ಕೈ ಹಿಡಿದು ಬೆಳೆಸಿದ್ದೀರಿ.

ಇಂಥವರ ಮಗನಾಗಿ ಹುಟ್ಟಿದ ನನ್ನನ್ನೂ ಸಹ ಪುರಸಭಾ ಸದಸ್ಯನಿಂದ, ಲೋಕಸಭಾ ಸದಸ್ಯನಾಗಿಸಿದ್ದೀರಿ ಈ ನಿಮ್ಮ ಪ್ರೀತಿ, ಪ್ರೋತ್ಸಾಹ ಮತ್ತು ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದರು.

ರಾಜಕೀಯ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಹಸ್ರಾರು ಹಿರಿಯರ ಆಶೀರ್ವಾದ ಮತ್ತು ಬೆಂಬಲಿಗರ ಶ್ರಮದಿಂದ ಸಂಸದನನ್ನಾಗಿಸಿದೆ.

ಇದಕ್ಕೆ ತಕ್ಕಂತೆ ತಾಲ್ಲೂಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಲ್ಲದೆ, ತಂದೆಯವರು ತೋರಿಸಿಕೊಟ್ಟ ಹಾದಿಯಲ್ಲೇ ಅವರು ಇಟ್ಟು ಹೆಜ್ಜೆಯಲ್ಲೇ ನಿಮ್ಮೆಲ್ಲರ ಸಹಕಾರದಿಂದ ನಾನು ಮುಂದುವರಿಯುತ್ತೇನೆ.

ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮುಂದುವರಿಸಿಕೊಂಡು, ಸರ್ಕಾರದ ಹಲವಾರು ಯೋಜನೆಗಳನ್ನ ಸಮಾಜದ ಎಲ್ಲಾ ವರ್ಗಗಳ ಜನತೆಗೆ ತಲುಪುವಂತೆ ಮಾಡಲು ಮುಂದಾಗುತ್ತೇನೆ ಎಂದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!