ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಇದೆ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬಿ.ಎಸ್. ವೈ ಆಗಮನ..!

ಶಿಕಾರಿಪುರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ ಬಳಿಕ ಇದೆ ಮೊದಲ ಬಾರಿಗೆ ಶಿಕಾರಿಪುರ ತಾಲೂಕಿನ ಶಾಸಕರು ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಶುಕ್ರವಾರ ಆಗಮಿಸಲಿದ್ದು ನಾಲ್ಕು ದಿನಗಳ ಕಾಲ ವಾಸ್ತವ್ಯ ಮಾಡಲಿದ್ದಾರೆ.

ದಿನಾಂಕ ಆಗಸ್ಟ್ 27 ಶುಕ್ರವಾರ ಬೆಂಗಳೂರು ನಿವಾಸದಿಂದ ಶಿವಮೊಗ್ಗಕ್ಕೆ ಆಗಮಿಸಲಿರುವ ಬಿ ಎಸ್ ವೈ ಶಿವಮೊಗ್ಗದ ನಿವಾಸದಲ್ಲಿ ವಾಸ್ತವ್ಯವನ್ನು ಮಾಡಲಿದ್ದಾರೆ.

28 ಶನಿವಾರ ಶಿವಮೊಗ್ಗದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವಮೊಗ್ಗದ ನಿವಾಸದಲ್ಲಿ ಮಾಡಲಿದ್ದಾರೆ.
ದಿ-29 ಭಾನುವಾರದಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಲಿರುವರು ಅವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿಕಾರಿಪುರದ ನಿವಾಸದಲ್ಲಿ ವಾಸ್ತವ್ಯವನ್ನು ಮಾಡಲಿದ್ದಾರೆ.

ಈ ಕುರಿತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರವಾಸದ ಕಾರ್ಯಕ್ರಮದ ಪಟ್ಟಿಯಲ್ಲಿ ತಿಳಿಸಲಾಗಿದೆ.
News by: Raghu Shikari-7411515737