ಶಿಕಾರಿಪುರ: ಸಾಂಸ್ಕೃತಿಕ ಭವನದಲ್ಲಿ‌ ಭಾನುವಾರ ವೀರಶೈವ ಸಮಾಜದ ವತಿಯಿಂದ ಹಾನಗಲ್ ಕುಮಾರಸ್ವಾಮಿಗಳ 154 ನೇ ಜಯಂತಿ, ಪ್ರತಿಭಾ ಪುರಸ್ಕಾರ, ಅಭಿನಂದನಾ ಸಭೆ…!

ಶಿಕಾರಿಪುರ: ಸಾಂಸ್ಕೃತಿಕ ಭವನದಲ್ಲಿ‌ ಭಾನುವಾರ ವೀರಶೈವ ಸಮಾಜದ ವತಿಯಿಂದ ಹಾನಗಲ್ ಕುಮಾರಸ್ವಾಮಿಗಳ 154 ನೇ ಜಯಂತಿ, ಪ್ರತಿಭಾ ಪುರಸ್ಕಾರ, ಅಭಿನಂದನಾ ಸಭೆ…!

ಶಿಕಾರಿಪುರ: ಲಿಂಗೈಕ್ಯ ಶ್ರೀ ಹಾನಗಲ್ಲ ಕುಮಾರ ಶಿವಯೋಗಿಗಳ 150 ನೇ‌ ಜಯಂತಿಮಹೋತ್ಸವ ಮತ್ತು ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಬಿ.ಎಸ್ ಯಡಿಯೂರಪ್ಪನವರಿಗೆ ಅಭಿನಂದನೆ ಪ್ರತಿಭಾ ಪುರಸ್ಕಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 10.10.2021 ನೇ ಭಾನುವಾರ ಬೆಳಿಗ್ಗೆ ಶಿಕಾರಿಪುರದ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ವೀರೇಶ್ ಎನ್ ವಿ ಪತ್ರಿಕಾಗೋಷ್ಠಿಲ್ಲಿ ತಿಳಿಸಿದರು.

ಈ ವೇಳೆ ಮಾತನಾಡಿ ಅವರು ಬಿ.ಎಸ್ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇಕಡಾ ತೊಂಬತ್ತು ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಸಂಸದ ಬಿ. ವೈ ರಾಘವೇಂದ್ರ ಹಾಗೂ ವಿವಿಧ ಮಠಾಧೀಶರು ಆಗಮಿಸಲಿದ್ದು ವೀರಶೈವ ಮಹಾಸಭಾದ ಶಿಕಾರಿಪುರ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀ ವೀರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಅಧಿಕ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ಮತ್ತು 1ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ ನಡೆಸಿದ ತುಮಕೂರು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ಇವರಿಂದ ವಿಶೇಷ ಉಪನ್ಯಾಸವಿರುತ್ತದೆ.

ಸಾಧನಾ ಅಕಾಡೆಮಿ ಯೂಟ್ಯೂಬ್ ಚಾನೆಲ್ ನ ಹತ್ತು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ಹೊಂದಿರುವ ಚಾನಲ್ ನ ಮುಖ್ಯಸ್ಥರಾದ ಮಂಜುನಾಥ್ ಬಿ.ಇವರು ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದು ಆಸಕ್ತ ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಪೋಷಕರು ಭಾಗವಹಿಸಿ ಈ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಾಗೂ ಹಾನಗಲ್ ಕುಮಾರಸ್ವಾಮಿಗಳ 150 ನೇ ಜಯಂತಿಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಈರಣ್ಣ ಗೌಡ, ಜಿಲ್ಲಾ ಕಾರ್ಯದರ್ಶಿ ಗೌರವ ಕಾರ್ಯದರ್ಶಿ ಕೊಟ್ರೇಶಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷರಾದ ಕಾಂಚನ್ ಕುಮಾರ್ ರವರು ಸಹಕಾರಿ ಸಂಘದ ಬಿ.ಡಿ ಭೂಕಾಂತ್, ಜಿಲ್ಲಾ ವೀರಶೈವ ಮಹಾಸಭಾದ ಕಾರ್ಯ ನಿರ್ವಾಹಕ ಘಟಕದ ಸಮಿತಿಯ ಕುಮಾರಸ್ವಾಮಿ ಹಿರೇಮಠ, ಗಿರೀಶ್ ಧಾರವಾಡ ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!