ಬೆಂಗಳೂರು:ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ..!

ಬೆಂಗಳೂರು:ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ..!

ಬೆಂಗಳೂರು:ಹಿಜಾಬ್ ಕುರಿತು ಮಧ್ಯಂತರ ಆದೇಶ ಅಂತಿಮ ತೀರ್ಪು ಬರುವವರೆಗೂ ಶಾಲಾ-ಕಾಲೇಜುಗಳು ಮುಂದುವರಿಕೆ..!

ಹಿಜಬ್​-ಕೇಸರಿ ವಿವಾದದಿಂದಾಗಿ ರಜೆ ಘೋಷಿಸಿದ್ದ ಶಾಲಾ-ಕಾಲೇಜುಗಳನ್ನು ನಾಳೆಯಿಂದಲೇ ಆರಂಭಿಸಬೇಕು, ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಉಡುಗೆ ಧರಿಸುವಂತಿಲ್ಲ ಎಂದು ಹೈಕೋರ್ಟ್ ಇಂದು​ ಸೂಚಿಸಿದೆ.

ಮಧ್ಯಂತರ ಆದೇಶ ಹೊರಡಿಸಿದ ಮುಖ್ಯ ನ್ಯಾಯಮೂರ್ತಿ

ಎರಡು ದಿನದಿಂದ ಮಧ್ಯಂತರ ಆದೇಶಕ್ಕೆ ವಕೀಲರು ಮನವಿ ಮಾಡಿದ್ದರು. ಇಂದು
ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ತಿ ಮಧ್ಯಂತರ ತೀರ್ಪು ನೀಡಿ ಆದೇಶ ಹೊರಡಿಸಿದ್ದು, ವಿವಾದದ ಕುರಿತು ಶೀಘ್ರವೇ ತೀರ್ಪು ನೀಡಲಾಗುತ್ತದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಯತಾಸ್ಥಿತಿ ಕಾಪಾಡಬೇಕು ಎಂದಿದೆ.

ಪ್ರಕರಣದ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ಶಾಲಾ – ಕಾಲೇಜುಗಳಲ್ಲಿ ಬಳಸುವಂತಿಲ್ಲ.

ಕಾಲೇಜು ಆಡಳಿತ ಮಂಡಳಿ ಸೂಚಿಸಿದ ಸಮವಸ್ತ್ರದಲ್ಲೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು ಎಂದು ಹೈಕೋರ್ಟ್​ ತಿಳಿಸಿದೆ.

ಅಲ್ಲದೇ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಪಡಿಸುವಂತಿಲ್ಲ. ಪ್ರಕರಣದ ಕುರಿತು ಅಂತಿಮ ತೀರ್ಪು ಬರುವವರೆಗೂ ಶಾಲಾ- ಕಾಲೇಜುಗಳು ನಿರಂತರವಾಗಿ ನಡೆಯಲಿ ಎಂದಿದೆ.

News by: Naveen Yuva

Admin

Leave a Reply

Your email address will not be published. Required fields are marked *

error: Content is protected !!