ಶಿಕಾರಿಪುರದಿಂದ ಸ್ಪರ್ಧಿಸುವಂತೆ ಬಿ.ವೈ ವಿಜಯೇಂದ್ರಗೆ ಶಿಕಾರಿಪುರ ಬಿಜೆಪಿ ಕಾರ್ಯಕರ್ತರ ಒತ್ತಾಯ…!
ಶಿಕಾರಿಪುರ ತಾಲೂಕಿನ ವಿಧಾನಸಭಾ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವ ಪ್ರಶ್ನೆ ಇಡೀ ರಾಜ್ಯದ ಜನರಲ್ಲಿ ಇಂದಿಗೂ ಯಕ್ಷ ಪ್ರಶ್ನೆಯಾಗಿ ಉಳಿದಿದೆ.
ಎಲ್ಲಾ ಪ್ರಶ್ನೆಗಳಿಗೆ ಅಂತ್ಯ ಹಾಡಲು ಶಿಕಾರಿಪುರದ ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ.
ಹೌದು ಶಿಕಾರಿಪುರ ತಾಲೂಕಿನಿಂದ ನೂರಾರು ಸಂಖ್ಯೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಬುಧವಾರ ಬೆಂಗಳೂರಿನ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿ.ಎಸ್ ವೈ ಸ್ಪರ್ಧಿಸದೇ ಇದ್ದಲ್ಲಿ ಬಿ.ವೈ ವಿಜಯೇಂದ್ರ ಸ್ಪರ್ಧಿಸಲೇ ಬೇಕು ಎಂದು ಒತ್ತಾಯವನ್ನು ಮಾಡಿದ್ದಾರೆ.
ಶಿಕಾರಿಪುರ ತಾಲೂಕು ಬಿಜೆಪಿಯ ಭದ್ರಕೋಟೆ ಎಂದೇ ಹೆಸರಾಗಿದ್ದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಕ್ಷೇತ್ರ ಬಿಎಸ್ ಯಡಿಯೂರಪ್ಪನವರ ಕುಟುಂಬದಿಂದ ಒಂದು ಬಾರಿ ಸಂಸದ ಬಿವೈ ರಾಘವೇಂದ್ರ ಅವರು ಉಪ ಚುನಾವಣೆಯಲ್ಲಿ ಜಯಗಳಿಸಿ ಶಾಸಕರಾಗಿದ್ದರು.
ಬಿಎಸ್ ಯಡಿಯೂರಪ್ಪ ಅನೇಕ ಬಾರಿ ಶಾಸಕರಾಗಿ ಆಯ್ಕೆಯಾಗಿ ನಾಲ್ಕು ಬಾರಿ ಮುಖ್ಯ ಮಂತ್ರಿಗಳಾಗಿದ್ದಾರೆ.
ಆದರೆ ಬಿಎಸ್ವೈ ವಯಸ್ಸಿನ ಕಾರಣದಿಂದ ಸ್ಪರ್ಧೆ ಮಾಡದೇ ಇದ್ದರೆ ಅವರ ನಂತರ ಶಿಕಾರಿಪುರ ತಾಲೂಕಿನಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವ ಪ್ರಶ್ನೆ ಬಿಜೆಪಿ ಕಾರ್ಯಕರ್ತರಲ್ಲಿಯೇ ಮೂಡಿದ್ದಂತೂ ಸತ್ಯ ಅದಕ್ಕೆಲ್ಲ ಅಂತ್ಯ ಆಡಲು ಬಿಜೆಪಿ ಕಾರ್ಯಕರ್ತರು ಒಂದು ಹೆಜ್ಜೆ ಮುಂದಾಗಿದ್ದಾರೆ ಎಂದರೆ ತಪ್ಪಾಗಲಾರದು.
ಶಿಕಾರಿಪುರ ತಾಲೂಕಿನಲ್ಲಿ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ಎಸ್ ವೈ ಕಿರಿಯ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಬಿಜೆಪಿ ಕಾರ್ಯಕರ್ತರ ಒತ್ತಾಸೆಯಾಗಿದೆ.
ಅದಕ್ಕೆ ಪುಷ್ಟಿ ಕೊಡುವಂತೆ ಬುಧವಾರ ತಾಲೂಕಿನ ಬಿಜೆಪಿಯ ಹಿರಿಯ ಮುಖಂಡರು ಪ್ರಮುಖ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಜಯೇಂದ್ರ ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಅನೇಕ ಮುಖಂಡರುಗಳನ್ನು ಭೇಟಿ ಮಾಡಿ ಬಿ ವೈ ವಿಜಯೇಂದ್ರ ಅವರನ್ನು ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ.
ಆದರೆ ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆಯೇ..ಇಲ್ಲವೇ. ಎಂಬುದು ಪ್ರಶ್ನೆಯಾಗಿ ಉಳಿದಿದೆ.
ಈ ಬಗ್ಗೆ ಅಧಿಕೃತ ಯಾವುದೇ ಹೇಳಿಕೆಗಳು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಯಾವುದೇ ಮುಖಂಡರು ಕೂಡ ನೀಡಿರುವುದಿಲ್ಲ.
ಒಟ್ಟಾರೆಯಾಗಿ ಶಿಕಾರಿಪುರ ತಾಲೂಕಿನ ರಾಜಕಾರಣದಲ್ಲಿ ಹೊಸ ಬದಲಾವಣೆ ಆಗುತ್ತದೆಯೇ ಎಂಬುದನ್ನು ಕಾದು ನೋಡ ಬೇಕಾಗಿದೆ.
News By: Raghu Shikari-7411515737