ವಿದ್ಯಾರ್ಥಿಗಳು ಜೀವನದಲ್ಲಿ ಜ್ಞಾನವನ್ನು ವೃದ್ಧಿಸಿಕೊಳ್ಳುವುದು ಅವಶ್ಯಕವಾಗಿದೆ :ಬಿ ಮಂಜುನಾಥ್

ವಿದ್ಯಾರ್ಥಿಗಳು ಜೀವನದಲ್ಲಿ ಜ್ಞಾನವನ್ನು ವೃದ್ಧಿಸಿಕೊಳ್ಳುವುದು ಅವಶ್ಯಕವಾಗಿದೆ :ಬಿ ಮಂಜುನಾಥ್

ಶಿಕಾರಿಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶಿಕಾರಿಪುರ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸವನ್ನು ನೀಡಿದ ಸಾಧನ ಅಕಾಡೆಮಿಯ ಮುಖ್ಯಸ್ಥರಾದ ಬಿ ಮಂಜುನಾಥ್ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಇದರಿಂದ ಭವಿಷ್ಯದಲ್ಲಿ ತಮ್ಮ ಜೀವನವನ್ನು ಕಟ್ಟಿಕೊಳ್ಳುವುದಕ್ಕೆ ಸಹಕಾರಿ ಆಗುತ್ತದೆ.

ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವುದು ಮತ್ತು ಈ ರೀತಿಯ ಉಪನ್ಯಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರವಾಗಿದೆ ಪ್ರತಿಯೊಬ್ಬರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಈ ವೇಳೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್, ಪ್ರಶಾಂತ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಅತ್ಯಂತ ಜಾಗೃತಿಯನ್ನು ವಹಿಸಬೇಕಾಗಿದೆ ಸೈಬರ್ ಕ್ರೈಂ ಎಂಬುದು ಜಗತ್ತಿನ ಅತ್ಯಂತ ಅಪಾಯಕಾರಿ ಕ್ರೈಂ ಗಳಲ್ಲಿ ಒಂದಾಗಿದೆ ಆದ್ದರಿಂದ ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಅತ್ಯಂತ ಜಾಗರೂಕರ ಆಗಿರಬೇಕು ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಕುಮಾರ್ ನೆರವೇರಿಸಿದರು.

ಈ‌ ಸಂದರ್ಭದಲ್ಲಿ ಪತ್ರಿಕಾ‌ ವಿತರಕರ ಸಂಘದ ಅಧ್ಯಕ್ಷರಾದ ಗಿಡ್ಡಪ್ಪ ಜೋರಡಿ ಅವರಿಗೆ ಸಂಘದ ವತಿಯಿಂದ ಸನ್ಮಾನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಹಾಲಸ್ವಾಮಿ ಕೆ ಎಸ್ ಹುಚ್ಚರಾಯಪ್ಪ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ರಮೇಶ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಆರ್.ಕೆ ವಿನಯ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಮಠದ್, ಸಂಘದ ಪ್ರಧಾನ ಕಾರ್ಯದರ್ಶಿ, ರಾಜು ಬಿ ಎಲ್ ಪತ್ರಕರ್ತರ ಸಂಘದ ಸರ್ವ ಸದಸ್ಯರು ಉಪನ್ಯಾಸಕರು ವಿದ್ಯಾರ್ಥಿಗಳು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!