ಪತ್ರಕರ್ತರ ಸಂಘ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು ಕಾರ್ಯಕ್ರಮ

ಪತ್ರಕರ್ತರ ಸಂಘ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು ಕಾರ್ಯಕ್ರಮ

ಶಿಕಾರಿಪುರ ಪಟ್ಟಣದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಕದ ಬಳಿ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ವಿಟ್ ಇಂಡಿಯಾ ಒಂದು ನೆನಪು ಕಾರ್ಯಕ್ರಮವನ್ನು ನಡೆಸಲಾಗಿದ್ದು ತಹಶಿಲ್ದಾರ್ ಎಂಪಿ ಕವಿರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕರು ಬಲಿದಾನ ಮಾಡಿದ್ದಾರೆ.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಈಸೂರಿನ ಹೋರಾಟ ಮರೆಯಲು ಸಾಧ್ಯವಿಲ್ಲ ಈಸೂರಿನ ಹೋರಾಟವನ್ನು ಸ್ಮರಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.

ಎಂಐಡಿಬಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ ಮಾತನಾಡಿ ದೇಶಕ್ಕಾಗಿ ಹೋರಾಡಿ ಬಲಿದಾನದಿಂದಾಗಿ ನಾವು ಇಂದು ದಾಸ್ಯದಿಂದ ಮುಕ್ತರಾಗಿದ್ದೇವೆ.

ಸ್ವಾತಂತ್ರ್ಯದ ನಂತರ ಸಂವಿಧಾನ ಮೂಲಕ ಮೂಲಭೂತ ಹಕ್ಕುಗಳನ್ನು ಪಡೆದುಕೊಂಡಿದ್ದೇವೆ ಸಂವಿಧಾನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೊತೆಗೆ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರನ್ನು ನಾವು ಸ್ಮರಿಸಬೇಕು ಎಂದರು‌.

ಈ ಸಂದರ್ಭದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ,ಪುರಸಭಾ ಮುಖಾಧಿಕಾರಿ ಭರತ್, ಬಾಪೂಜಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಪಾಪಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಧುಕೇಶ್ವರ್ ವಕೀಲರಾದ ಕೋಡಪ್ಪ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಕೆ ಎಸ್ ಹುಚ್ಚರಾಯಪ್ಪ ತಾಲೂಕ್ ಅಧ್ಯಕ್ಷರಾದ ಚಂದ್ರಶೇಖರ್ ಮಠದ್ ಕಸಾಪ ಅಧ್ಯಕ್ಷ ರಘು ಹೆಚ್ ಎಸ್, ಸರ್ವ ಸದಸ್ಯರು ಸಾರ್ವಜನಿಕರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!