ಶಿವಮೊಗ್ಗ: ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ ಕಾಲೇಜುಗಳಿಗೆ ರಜೆ

ಶಿವಮೊಗ್ಗ :ಆ.16 ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಇಂದು ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್’ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಕುರಿತಂತೆ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್ ಮಾಹಿತಿ ನೀಡಿದ್ದು, ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿದ್ದರೆ.

ಈ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಇಂದು ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್’ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದಿದ್ದಾರೆ.

ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ.

ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!