ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಪಾಸ್ ವಿತರಣೆ
ಶಿರಾಳಕೊಪ್ಪ: ಪಟ್ಟಣದಲ್ಲಿ ಕರ್ನಾಟಕ ಸ್ಟೇಟ್ ಕನ್ಸಟ್ರಕ್ಷನ್ ವರ್ಕರ್ ಯೂನಿಯನ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ, ಶಿರಾಳಕೊಪ್ಪ ಹಾಗೂ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗಯೋಗದೊಂದಿಗೆ ನೊಂದಾದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್, 45 ಕಿ.ಮೀ ಪ್ರಯಾಣದ KSRTC ಉಚಿತ ಬಸ್ ಪಾಸ್ ವಿತರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಹೌಸಿಂಗ್ ಬೋರ್ಡ್ ನಿರ್ದೇಶಕ ಅಗಡಿ ಅಶೋಕ್ ಅವರು , KSRTC ಅಧಿಕಾರಿ ವಿಜಯ್ ಕುಮಾರ್,ಯೂನಿಯನ್ ಜಿಲ್ಲಾಧ್ಯಕ್ಷ ಸುಬ್ರಮಣಿ,ಕಾರ್ಯಧ್ಯಕ್ಷ ಕೆ ಸುಂದರ್ ಬಾಬು, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್ ಕುಮಾರ್, ಮ್ಯಾಕ್ಸ್ ಆಸ್ಪತ್ರೆಯ ಆದಿಶೇಷ, ಸಿಇಓ ಕೌಶಿಕ್, ಶಿರಾಳಕೊಪ್ಪ ಪುರಸಭೆ ಅಧ್ಯಕ್ಷರು, ಸದಸ್ಯರು, ಯೂನಿಯನ್ ಪದಾಧಿಕಾರಿಗಳು ಮತ್ತಿತರ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.
News By Raghu Shikari-7411515737