ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
![ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ](https://shikarinews.com/wp-content/uploads/2022/10/photo_2022-10-18_11-52-25.jpg)
ಭದ್ರಾವತಿ: ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ತವೆಸಗಿದ್ದ ಆರೋಪಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 01 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
![](https://shikarinews.com/wp-content/uploads/2022/10/child-abuse-2.jpg)
ಏನಿದು ಪ್ರಕರಣ?
ರಾಘವೇಂದ್ರ (27) 3 ವರ್ಷ 5 ತಿಂಗಳ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
![](https://shikarinews.com/wp-content/uploads/2022/10/photo_2022-10-18_11-52-27.jpg)
ತನಿಖಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಆರೋಪಿ ರಾಘವೇಂದ್ರನಿಗೆ ೨೦ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದ್ದು, ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಸಜಾ ವಿಧಿಸಿ ಆದೇಶಿಸಿದೆ.
News by Raghu Shikari-7411515737