5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವಯೋಮಿತಿ ಹೆಚ್ಚಳ.

5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವಯೋಮಿತಿ ಹೆಚ್ಚಳ.

ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು , ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಯಲ್ಲಿದ್ದಂತ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗದಿ ಪಡಿಸಲಾಗಿದ್ದಂತ ಗರಿಷ್ಠ ವಯೋಮಿತಿ ಹೆಚ್ಚಿಸಿದಲ್ಲದೇ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದು , ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) 420 + 3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137 + 454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ .

ವಯೋಮಿತಿ ಹೆಚ್ಚಳ

ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು , ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ , ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ .

ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ . ರಾಜ್ಯ ಸರ್ಕಾರದಿಂದ ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ . ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ .

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!