ಚಿಕ್ಕ ಜೋಗಿಹಳ್ಳಿಯ 24*7 ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಮಹಿಳೆ ಸಾವು..!

ಚಿಕ್ಕ ಜೋಗಿಹಳ್ಳಿಯ 24*7 ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಮಹಿಳೆ ಸಾವು..!

ಶಿಕಾರಿಪುರ ತಾಲೂಕಿನ ಚಿಕ್ಕ ಜೋಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ನರ್ಸ್ ಗಳು ಇಲ್ಲದೆ ಮಹಿಳೆ ಸಾವನ್ನಪ್ಪಿದರು ಎಂದು‌ ಆಸ್ಪತ್ರೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾನುವಾರ ರಾತ್ರಿ ಚಿಕ್ಕ ಜೋಗಿಹಳ್ಳಿ ಗ್ರಾಮದ ಹಾಲಮ್ಮ ಕೋಂ ಜಯಪ್ಪ (65) ಮಹಿಳೆಗೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚಿಕ್ಕಜೋಗಿಹಳ್ಳಿ 24*7 ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಆ ಸಂದರ್ಭದಲ್ಲಿ ವೈದ್ಯರು ಮತ್ತು ನರ್ಸ್ ಗಳು ಯಾರು ಇಲ್ಲದ ಕಾರಣ ತೀವ್ರ ನೋವಿನಿಂದ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಈ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬಸ್ಥರು ಮತ್ತು ಊರಿನ ಗ್ರಾಮಸ್ಥರು ಆಸ್ಪತ್ರೆಯ ಎದುರು ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.

ಈ ಆಸ್ಪತ್ರೆಯಲ್ಲಿ ಇದೇ ರೀತಿ ಘಟನೆಗಳು ನಡೆಯುತ್ತಿದ್ದು 24 * 7 ಆಸ್ಪತ್ರೆ ಇದಾಗಿದ್ದು ಆದರೂ ಕೂಡ ವೈದ್ಯರು ಮತ್ತು ಸಿಬ್ಬಂದಿಗಳು ವಾಸವಿರುವುದಿಲ್ಲ ಮಹಿಳೆಯನ್ನು ಕರೆದುಕೊಂಡು ಬಂದಾಗ ಆಸ್ಪತ್ರೆಯ ಲೈಟ್ ಗಳು ಆನ್ ಇರಲಿಲ್ಲ ವೈದ್ಯಕೀಯ ಸಿಬ್ಬಂದಿಗಳು ಕೂಡ ಇಲ್ಲದ ಕಾರಣ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ಸಿಕ್ಕಿಲ್ಲ ಇದರಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟ ಮೇಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!