ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ…!!!

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ…!!!

ಬೆಂಗಳೂರು: ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ(80) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಲೋಹಿತಾಶ್ವ ಅವರಿಗೆ ಮೂವರು ಮಕ್ಕಳಿದ್ದು, ಅವರಲ್ಲಿ ಕನ್ನಡ ಚಿತ್ರರಂಗದಲ್ಲಿ ಉತ್ತಮ ಖಳನಟನಾಗಿ ಗುರುತಿಸಿಕೊಂಡಿರುವ ಶರತ್ ಲೋಹಿತಾಶ್ವ ಕೂಡ ಒಬ್ಬರು.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅಭಿಮನ್ಯು, ಎಕೆ 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳೂ ಸೇರಿದಂತೆ ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!