ನಕಲಿ ಪಿಹೆಚ್‌ಡಿ ಪ್ರಮಾಣ ಪತ್ರ ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕ ಅಮಾನತು..!

ನಕಲಿ ಪಿಹೆಚ್‌ಡಿ ಪ್ರಮಾಣ ಪತ್ರ ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕ ಅಮಾನತು..!

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಂ. ಎಚ್. ವಿದ್ಯಾಶಂಕರ್ ಅಮಾನತು ಮಾಡಿ ಕುವೆಂಪು ವಿವಿ ಕುಲಸಚಿವೆ ಆದೇಶ ಹೊರಡಿಸಿದ್ದಾರೆ.

ವಿದ್ಯಾಶಂಕರ್ ಅವರು ಬಿಹಾರದ ಬೋಧಗಯಾದಲ್ಲಿರುವ ಮಗಧ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾಗಿ ನಕಲಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು

ಈ ಪ್ರಮಾಣಪತ್ರವನ್ನು ಪರಿಶೀಲನೆಗಾಗಿ ಆ ವಿಶ್ವವಿದ್ಯಾಲಯಕ್ಕೆ ಕಳಿಸಿದಾಗ ಅದು ನಕಲಿ ಎನ್ನುವುದು ಸಾಬೀತಾದ ಹಿನ್ನೆಲೆಯಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದರಿಂದ ಶಿಸ್ತು ಕ್ರಮಕ್ಕಾಗಿ ಅಮಾನತಿನಲ್ಲಿ ಇಡಲಾಗಿದೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!