ಸರ್ಕಾರದ ಮುಂದೆ ಮುಸ್ಲಿಂ ಮಹಿಳಾ ಕಾಲೇಜಿನ ಪ್ರಸ್ತಾಪವಿಲ್ಲ: ಸಿ.ಎಂ ಬಸವರಾಜ್ ಬೊಮ್ಮಾಯಿ.
ಮುಸ್ಲಿಂ ಹೆಣ್ಣು ಮಕ್ಕಳ ಪ್ರತ್ಯೇಕ ಕಾಲೇಜಿನ ಕುರಿತು ಹಿಂದೂ ಸಂಘಟನೆಗಳ ತೀವ್ರವಿರೋಧದ ನಂತರ ಸರ್ಕಾರ ಈ ವಿಚಾರದಲ್ಲಿ ಹಿಂದೆ ಸರಿದಿದೆ
ಈ ಕುರಿತು ಭದ್ರಾವತಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಸೇರಿದಂತೆ ರಾಜ್ಯದ 10 ಕಡೆ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ವಕ್ಫ್ ಬೋರ್ಡ್ ಮೂಲಕ ಕಾಲೇಜು ನಡೆಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ವರದಿಯಾಗಿತ್ತು. ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
News by Raghu shikari-7411515737