ಬೈಕ್-ನಲ್ಲಿ ಮದುವೆಗೆ ಹೊರಟ ವೇಳೆ ಲಾರಿ ಡಿಕ್ಕಿ…!!

ಬೈಕ್-ನಲ್ಲಿ ಮದುವೆಗೆ ಹೊರಟ ವೇಳೆ ಲಾರಿ ಡಿಕ್ಕಿ…!!

ಸೊರಬ: ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆಯುತ್ತಿದ್ದ ಸಹೋದರಿಯ ಮಗಳ ಮದುವೆಗೆ ಹೊರಟಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿದೆ.

ಸೊರಬ ತಾಲೂಕು ಆನವಟ್ಟಿ ಸಮೀಪದ ಹುರಳಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಬೈಕ್ ಚಲಾಯಿಸುತ್ತಿದ್ದ ಮುತ್ತಪ್ಪ ಮೃತಪಟ್ಟಿದ್ದಾರೆ. ಸಂಬಂಧಿ ರವಿ ಎಂಬುವವರು ಗಾಯಗೊಂಡಿದ್ದಾರೆ. ಬ್ಯಾಗವಾದಿ ಗ್ರಾಮದಿಂದ ಆನವಟ್ಟಿಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇಬ್ಬರು ಬೈಕಿನಲ್ಲಿ ತೆರಳುತ್ತಿದ್ದರು.

ಹುರಳಿಕೊಪ್ಪ ಬಳಿ ಎದುರಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿ ಮುತ್ತಪ್ಪ ಅವರಿಗೆ ರಕ್ತಸ್ರಾವ ಉಂಟಾಗಿತ್ತು. ರವಿ ಅವರಿಗು ಗಾಯವಾಗಿದೆ. ಸ್ಥಳೀಯರು ಅವರನ್ನು ಆನವಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸಗೆ ಮುತ್ತಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಮತ್ತಪ್ಪ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!