ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ: ಸಂಪುಟ ಒಪ್ಪಿಗೆ

ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ: ಸಂಪುಟ ಒಪ್ಪಿಗೆ

ಬೆಳಗಾವಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ರಾಜ್ಯ ಸಂಪುಟ ಸಭೆಯ ನಂತರ ಮಾತನಾಡಿರುವ ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಆರ್. ಅಶೋಕ್, ಪಂಚಮಸಾಲಿ, ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಒಪ್ಪಿಗೆ ಪಡೆಯಲಾಗಿದೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ 2ಸಿ ಮೀಸಲಾತಿ ನೀಡಲು ನಿರ್ಧಸಿಲಾಗಿದ್ದು, ಈ ಸಮುದಾಯದವರು 2 ಎ ಮೀಸಲಾತಿಗೆ ಪಟ್ಟು ಹಿಡಿದಿದ್ದರು. ಇನ್ನು, 3 ಬಿಯಲ್ಲಿದ್ದ ಲಿಂಗಾಯತರಿಗೆ 2 ಸಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಒಕ್ಕಲಿಗರಿಗೆ 2 ಸಿ ಅಡಿ ಮೀಸಲಾತಿ ನೀಡಲಿದ್ದು, 3 ಎ ನಲ್ಲಿದ್ದ ಒಕ್ಕಲಿಗರು 2ಡಿ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ. ಹಾಗೆಯೇ, ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10ರಿಂದ ಶೇ.3ಕ್ಕೆ ಇಳಿಕೆ ಮಾಡಲಾಗುತ್ತದೆ. EWS ಮೀಸಲಾತಿ ಶೇ.ರಷ್ಟು 2 ಸಿ ಹಾಗೂ 2 ಡಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

News by Raghu shikari-7411515737

Admin

Leave a Reply

Your email address will not be published. Required fields are marked *

error: Content is protected !!