|Shivamogga Airport|ಪ್ರಧಾನಿ ಮೋದಿಯವರಿಂದ ಲೋಕಾರ್ಪಣೆಗೊಳ್ಳಲಿರುವ ಯೋಜನೆಗಳು….!!!

|Shivamogga Airport|ಪ್ರಧಾನಿ ಮೋದಿಯವರಿಂದ  ಲೋಕಾರ್ಪಣೆಗೊಳ್ಳಲಿರುವ ಯೋಜನೆಗಳು….!!!

ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಒಟ್ಟು ರೂ.896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ,

ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮಥ್ರ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡ.

ಶಂಕುಸ್ಥಾಪನೆಗೊಳ್ಳುವ ಯೋಜನೆಗಳು:
ರೂ.995 ಕೋಟಿ ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, ರೂ.97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ.862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ.91.50 ಕೋಟಿ ಮೊತ್ತದ ಕಾಮಗಾರಿ ಲೋಕಾರ್ಪಣೆ.


ರೂ.66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ.96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. ರೂ.56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿ.

News by Raghu Shikari -7411515737

Admin

Leave a Reply

Your email address will not be published. Required fields are marked *

error: Content is protected !!