ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀನಾಶ್ರೀ ರಾಜಿನಾಮೆ..!!

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀನಾ ಶ್ರೀನಿವಾಸ್ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಹೋರಾಟ ಮುಖಂಡರಾದ ತೀ.ನಾ.ಶ್ರೀನಿವಾಸ್ ಕಾಂಗ್ರೆಸ್ ನ ಮೇಲೆ ಆರೋಪ ಮಾಡಿ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಅವರು 38 ವರ್ಷ ರೈತರ ಪರ ಹೋರಾಟ ಮಾಡಿಕೊಂಡು ಬಂದಿದ್ದೇನೆ ಈ ಪಕ್ಷಕ್ಕೆ ಜೀವ ಸವಿಸಿದ್ದೇನೆ.34 ವರ್ಷ ಪಕ್ಷಕ್ಕಾಗಿ ದುಡಿದಿದ್ದು 4 ವರ್ಷ ಪಕ್ಷದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ.

ಆದರೆ ಈಗ ರೈತರ ಪರವಾಗಿ ಧ್ವನಿಯಾಗಿ ನಿಲ್ಲಲು ನನಗೆ ಸಾಗರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೇಟ್ ಕೇಳಿದ್ರೆ ತಿರಸ್ಕರಿಸುತ್ತಾರೆ ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ರಾಜೀನಾಮೆ ಪತ್ರ ಕಳುಹಿಸಿರುವುದಾಗಿ ತಿಳಿಸಿದರು.
ಜೆಡಿಎಸ್ ನಿಂದ ಬಂದ ಮಧು ಬಂಗಾರಪ್ಪನವರಿಗೆ ಪಕ್ಷದಲ್ಲಿ ಮೂರು ನಾಲ್ಕು ಸ್ಥಾನ ನೀಡಿದ್ದಾರೆ.
ಸಾಗರದಲ್ಲಿ ಹೋರಾಟಗಾರ ಕಾಗೋಡು ತಿಮ್ಮಪ್ಪನವರಿಗೆ ಸಾಗರದಲ್ಲಿ ಟಿಕೆಟ್ ನೀಡಿಬೇಕಿತು ಅದರೆ ಬೇರೆ ಅವರಿಗೆ ಕೊಡುವ ಸಾಧ್ಯತೆ ಇದೆ ಅದ್ದರಿಂದ ಸಾಗರದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು ಸೊರಬದಲ್ಲೂ ಸ್ವಾತಂತ್ರ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ ಎಂದರು.
ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್ ಚುನಾವಣೆಗೂ ಅಭ್ಯರ್ಥಿಗಳನ್ನು ಹಾಕುವುದಾಗಿ ಎಂದರು.
News by Raghu Shikari-7411515737