ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ…..!

ಶಿಕಾರಿಪುರ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಗುರುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಯನ್ನು ಅನಾವರಣ ಗೊಳಿಸಿದರು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಕನಕ ಗುರು ಪೀಠದ ಹೊಸದುರ್ಗ ಶಾಖ ಮಠದ ಶ್ರೀಗಳಾದ ಈಶ್ವರಾನಂದಪುರಿ ಸ್ವಾಮೀಜಿಯವರು ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕುರುಬ ಸಮಾಜದ ತಾಲೂಕು ಅಧ್ಯಕ್ಷರಾದ ಕಬಡ್ಡಿ ರಾಜಣ್ಣ,ಮುಖಂಡರಾದಟಿಎಸ್ ಮೋಹನ್,ಕೆ ಹಾಲಪ್ಪ,ನಗರದ ಮಹಾದೇವಪ್ಪ, ರಾಜ್ಯ ಹಾಲುಮತ ಮಹಾಸಭಾದ ಉಪಾಧ್ಯಕ್ಷ ಡಾ.ಪ್ರಶಾಂತ್ ಸೇರಿದಂತೆ ಸಮಾಜ ಸಾರ್ವಜನಿಕರು ಇದ್ದರು.
News by Raghu shikari-7411515737