ಮೋದಿ ನೇತೃತ್ವದ ಬಿಜೆಪಿಗೆ ಜೈ: ಅಧಿಕೃತ ಬೆಂಬಲ ಘೋಷಿಸಿದ ಸಂಸದೆ ಸುಮಲತಾ ಅಂಬರೀಶ್….!!

ಮಂಡ್ಯ: ಇನ್ನು ಮುಂದೆ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಎಂದು ಘೋಷಣೆ ಮಾಡುವ ಮೂಲಕ ತಮ್ಮ ಬಿಜೆಪಿ ಬೆಂವಲವನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ನಾಲ್ಕು ವರ್ಷಗಳ ಕಾಲ ಎಲ್ಲವನ್ನೂ ಕಂಡು, ಅನುಭವಿಸಿ, ಅಭಿಪ್ರಾಯ ಸಂಗ್ರಹಿಸಿ, ಚಿಂತನೆ ನಡೆಸಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ಘೋಷಣೆ ಮಾಡಲು ನಿರ್ಧರಿಸಿದ್ದೇನೆ ಎಂದರು

ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ನಾಲ್ಕು ವರ್ಷದಲ್ಲಿ ಮಂಡ್ಯದಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಮಂಡ್ಯದಲ್ಲೂ ಸಹ ಇನ್ನಷ್ಟು ಸ್ವಚ್ಛ ಭಾರತ್ ಮಾಡಬೇಕಿದೆ. ಹೀಗಾಗಿ, ಕ್ಷೇತ್ರದ ಅಭಿವೃದ್ದಿಯ ದೃಷ್ಠಿಯಿಂದ ಬಿಜೆಪಿಯನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ.
ಮೈ ಶುಗರ್ ಕಾರ್ಖಾನೆ ಮರು ಆರಂಭ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಹಳಷ್ಟು ಬಾರಿ ಕೈ ಹಿಡಿದಿದೆ. ಹೀಗಾಗಿ, ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಕೊಂಡೊಯ್ಯಲು ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದರು.
News by Raghu shikari-7411515737