ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಉದ್ಘಾಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ…!

ಶಿಕಾರಿಪುರ ಪಟ್ಟದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ಶುಕ್ರವಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿ ಸಾರ್ವಜನಿಕರ ಸೇವೆ ಅವಕಾಶ ಮಾಡಿಕೊಟ್ಟಿದ್ದು ಈ ನಿಲ್ದಾಣದ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದು ಈ ನಿಲ್ದಾಣಕ್ಕೆ ಕ್ರಾಂತಿಯ ವೀರ ಸಂಗೊಳ್ಳಿ ರಾಯಣ್ಣ ನವರ ಹೆಸರು ನಾಮಕರಣ ಮಾಡಲಾಗಿದೆ.

ಈ ಸಂದರ್ಭದಲ್ಲಿ ಸಂಸದ ಬಿವೈ ರಾಘವೇಂದ್ರ, ರಾಜ್ಯ ಉಗ್ರಣ ನಿಗಮದ ಅಧ್ಯಕ್ಷ ಹೆಚ್ ಟಿ ಬಳಿಗಾರ್,ಎಂಐಡಿಬಿ ಅಧ್ಯಕ್ಷ ಕೆ.ಎಸ್ ಗುರುಮೂರ್ತಿ ಸೇರಿದಂತೆ ಅನೇಕ ಮುಖಂಡರು ಇದ್ದರು.
News by Raghu shikari-7411515737