ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಘೋಷಣೆ

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಘೋಷಣೆ

ಶಿವಮೊಗ್ಗ:ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಂತೆಯೇ ಬಿಜೆಪಿಯ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಯಾಗಿದೆ.

ಶಿವಮೊಗ್ಗ ಶಿವಮೊಗ್ಗ ನಗರ ಕ್ಷೇತ್ರದಿಂದ ಸಂಘ ಪರಿವಾರದ ಹಿನ್ನೆಲೆಯುಳ್ಳ, ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಬಿಜೆಪಿ ವರಿಷ್ಠರು ಇಂದು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಅವರನ್ನು ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಮೂಲಕ ಈ ವಿಚಾರದಲ್ಲಿದ್ದ ಎಲ್ಲ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ 1 ದಿನ ಉಳಿದಿರುವ ವೇಳೆಯಲ್ಲಿ ಅಳೆದು ತೂಗಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!