ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್

ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.

ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ.

ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.

ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ಆದರೆ ಕೆಲವು ದ್ವಿಚಕ್ರ ವಾಹನ ಸವಾರರು ಇದ್ದುದರಿಂದ ಅಪಾಯದ ಸೂಚನೆ ಎದ್ದು ಕಾಣುತ್ತಿತ್ತು.ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.

ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

News by: Chikkamagaluru repoter

Admin

Leave a Reply

Your email address will not be published. Required fields are marked *

error: Content is protected !!