ಅಹಿಂದ ನಾಯಕ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ, ರಾಜಕೀಯ ಜೀವನ ಹೋರಾಟ..!
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.
ಸದನಕಲಿ ರಾಜಕೀಯ ಖ್ಯಾತ ವಾಗ್ಮಿ ರಾಜ್ಯದ ಧೀಮಂತ ನಾಯಕ ಅನುಭವಿ ರಾಜಕಾರಣಿ ಮಾಸ್ ಲೀಡರ್ ಎಂದೇ ಸಿದ್ದರಾಮಯ್ಯ ಗುರುತಿಸಿಕೊಂಡಿದ್ದಾರೆ. ಈ ಹಿಂದೆ 2013 ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದರು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಾಲ್ಯ ಜೀವನ
ಮೈಸೂರಿನ ಜಿಲ್ಲೆ ವರುಣಾ ತಾಲೂಕಿನ ಸಿದ್ಧರಾಮನಹುಂಡಿ ಗ್ರಾಮದಲ್ಲಿ 1948 ಆಗಸ್ಟ್ 12ರಂದು ಜನಿಸಿದರು ತಂದೆ ಸಿದ್ಧರಾಮೇಗೌಡ, ತಾಯಿ-ಬೋರಮ್ಮ
ಚಿಕ್ಕ ವಯಸ್ಸಿನಲ್ಲಿಯೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತ್ತಿದ್ದರು.
ವಿದ್ಯಾಭ್ಯಾಸ..
ತಮ್ಮ ಹುಟ್ಟೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ವಿದ್ಯಾಭ್ಯಾಸ ಪಡೆದರು. ಮೈಸೂರಿನಲ್ಲಿ ಪಿ.ಯು.ಸಿ ಹಾಗೂ ಬಿ.ಎಸ್ಸಿ ಓದಿದರು.
ನಂತರ ಮೈಸೂರು ವಿವಿಯಿಂದ ಕಾನೂನು ಪದವಿ ಪಡೆದು, ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜೂನಿಯರ್ ಆಗಿ ಕೆಲಸ ಮಾಡಿದರು. ನಂತರ 1978ರವರೆಗೆ ಸ್ವಂತ-ವಕೀಲ ವೃತ್ತಿ ನಡೆಸಿದರು.
ರಾಜಕೀಯ ಜೀವನ…
1983ರ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದ ಕಡೆಗಳಿಲ್ಲಿ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.
1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ದಾಖಲಿಸಿದರು. ಪಶುಸಂಗೋಪನೆ ಸಚಿವರಾದರು. ನಂತರ ಸಂಪುಟ ಪುನರ್ ರಚನೆಯಲ್ಲಿ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದರು.
1989ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆಯಲ್ಲಿ ಸಿದ್ಧರಾಮಯ್ಯ ಸೋತರು. ಜನತಾ ಪಕ್ಷ ವಿಭಾಗವಾದಗ ಜನತಾದಳ ಸೇರಿದರು. 1992ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು.
1994ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು. ,1999ರ ಚುನಾವಣೆಯ ಹೊತ್ತಿಗೆ ಜನತಾದಳ 2 ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು.
1999 ಚುನಾವಣೆಯಲ್ಲಿ ಸೋಲು ಕಂಡರು.
2004ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.
2004ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ 2 ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು, 2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಗೆಲುವು ಕಂಡರು.
2013ರ ಚುನಾವಣೆಯಲ್ಲಿ ಪಕ್ಷದಿಂದ ಮುಖ್ಯಮಂತ್ರಿಯಾದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ 13, 2013ರಂದು ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಜಾರಿ ಮಾಡಿದರು. ದಲಿತ ವರ್ಗಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಿದರು.
2018 ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದರು. ನಂತರ ವಿರೋಧ ಪಕ್ಷದ ನಾಯಕರಾದರು. 2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಗೆದ್ದಿರುವ ಸಿದ್ಧರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ.
ಸಿದ್ದರಾಮಯ್ಯ ಅಹಿಂದ ನಾಯಕರಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು ಜನಪರ ಯೋಜನೆ ಸ್ವತಂತ್ರ ನಿರ್ಧಾರ ಹಾಗೂ ಅವರ ನೇರ ನಡೆ ನುಡಿಯಿಂದ ಇಡೀ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
Special Story- Raghu Shikari-7411515737