ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ,ಡಿಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ,ಡಿಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರ

ಬೆಂಗಳೂರು: ರಾಜ್ಯದ 24ನೇ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಲಕ್ಷಾಂತರ ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯನವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗಂಗಾಧರ ಅಜ್ಜನವರ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಮತ್ತಿತರ ಗಣ್ಯರು ಇದ್ದರು.

News by: Raghu Shikari-7411515737

Raghu Shikari

Leave a Reply

Your email address will not be published. Required fields are marked *

error: Content is protected !!