ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಶಿಕಾರಿಪುರದಲ್ಲಿ ಸಂಭ್ರಮಾಚರಣೆ..!

ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದಿದ್ದು ಇಂದು ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಸಂಭ್ರಮಿಸಿದರು.

ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಪೂಜೆಯನ್ನು ಸಲ್ಲಿಸಿದರು.

ಕನಕ ಪಾರ್ಕ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಕನಕದಾಸರ ಮೂರ್ತಿಗೆ ಹಾರವನ್ನು ಹಾಕಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಖುಷಿಯನ್ನು ಸಂಭ್ರಮಿಸಿದರು.

ಪ್ರಮುಖ ಬೀದಿಗಳಲ್ಲಿ ಎಸ್ ಪಿ ನಾಗರಾಜ್ ಗೌಡ ಅಭಿಮಾನಿ ಬಳಗದ ವತಿಯಿಂದ ಸಿದ್ದರಾಮಯ್ಯ,ಡಿಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರಕ್ಕೆ ಜೈಕಾರ ಹಾಕುತ್ತಾ ಪಟಾಕಿ ಸಿಡಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಖುಷಿಯನ್ನು ಸಂಭ್ರಮಾಚರಣೆ ನಡೆಸಿದರು.
News by: Raghu Shikari-7411515737