ಸಭೆ ಸಮಾರಂಭ ಗಳಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸಲ್ಲ: ಸಿಎಂ ಸಿದ್ದರಾಮಯ್ಯ

ಸಭೆ ಸಮಾರಂಭ ಗಳಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು
ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಟ್ವಿಟರ್ ಮೂಲಕ ಸಂದೇಶ ನೀಡಿದ್ದಾರೆ‌.

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯಿಸುತ್ತದೆ.

ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.

ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎನ್ನುವ ಮೂಲಕ‌ ಸರಳತೆಯನ್ನು ಮತ್ತೊಮ್ಮೆ ಸಾಭೀತು ಮಾಡಿದ್ದಾರೆ.

News by: Raghu Shiakri-7411515737

Admin

Leave a Reply

Your email address will not be published. Required fields are marked *

error: Content is protected !!