ವಿದ್ಯುತ್ ಬೆಲೆ ಏರಿಕೆ‌ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ..!

ವಿದ್ಯುತ್ ಬೆಲೆ ಏರಿಕೆ‌ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ..!

ಶಿವಮೊಗ್ಗ : ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ, ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ನೇತೃತ್ವದಲ್ಲಿ
200 ಯೂನಿಟ್ ಫ್ರೀ ವಿದ್ಯುತ್ ಕೊಡ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ ಇದರ ಬೆನ್ನಲ್ಲೇ ಕನಿಷ್ಟ ದರವನ್ನು 125 ರೂ. ನಿಂದ 200 ರೂ ಗೆ ಹೆಚ್ಚಿಸಿದೆ.
ರೈತ ಹಾಗೂ ಜನ ವಿರೋಧಿ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಟಿ
ಡಿ ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ದಿಕ್ಕಾರ ಕೂಗುತ್ತಾ
ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನಗರ ಶಾಸಕ ಎಸ್.ಎನ್ ಚೆನ್ನಬಸಪ್ಪ, ಮಾಜಿ ಎಂಎಲ್ಸಿ ಆರ್.ಕೆ.ಸಿದ್ದರಾಮಣ್ಣ, ಬಿಜೆಪಿ ವಿಭಾಗ ಪ್ರಮುಖ್ ಗಿರೀಶ್ ಪಟೇಲ್, ಪ್ರಮುಖರಾದ ಜಗದೀಶ್, ಜ್ಯೋತಿಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!